alex Certify BREAKING : ಕರ್ನಾಟಕದಲ್ಲಿ ಏ. 26, ಮೇ. 7ರಂದು ಮತದಾನ, ಇಲ್ಲಿದೆ ಜಿಲ್ಲಾವಾರು ಮಾಹಿತಿ |Lok Sabha Election 2024 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕರ್ನಾಟಕದಲ್ಲಿ ಏ. 26, ಮೇ. 7ರಂದು ಮತದಾನ, ಇಲ್ಲಿದೆ ಜಿಲ್ಲಾವಾರು ಮಾಹಿತಿ |Lok Sabha Election 2024

ಬೆಂಗಳೂರು  :     ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು,  ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು 2 ಹಂತದಲ್ಲಿ ಮತದಾನ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ‘ ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ  ಎಂದರು.

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಏಪ್ರಿಲ್ 26 ರಂದು ಈ ಜಿಲ್ಲೆಗಳಲ್ಲಿ ಮತದಾನ

ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ.

ಮೇ 7 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮತದಾನ

ಕರ್ನಾಟಕದಲ್ಲಿ ಮೇ 7 ರಂದು ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ.

ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...