
ಬಾಲಿವುಡ್ ಬಾದ್ಷಾ ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ‘ಜವಾನ್’ ಇಂದು ವಿಶ್ವದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪಠಾಣ್ ಸಿನಿಮಾ ಯಶಸ್ಸಿನ ಬಳಿಕ ಇದೀಗ ಮತ್ತೊಂದು ದಾಖಲೆ ಬರೆಯಲು ಶಾರುಖಾನ್ ಸಜ್ಜಾಗಿದ್ದಾರೆ. ಅಟ್ಲೀ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಕಥಾಂದರ ಹೊಂದಿರುವ ಈ ಚಿತ್ರದಲ್ಲಿ ಶಾರುಖ್ ಖಾನ್ ಗೆ ಜೋಡಿಯಾಗಿ ನಯನತಾರಾ ಅಭಿನಯಿಸಿದ್ದು, ವಿಜಯ್ ಸೇತುಪತಿ ಸೇರಿದಂತೆ ಸಾನಿಯಾ ಮಲ್ಹೋತ್ರ, ಲೆಹರ್ ಖಾನ್, ಪ್ರಿಯಾಮಣಿ ತೆರೆ ಹಂಚಿಕೊಂಡಿದ್ದಾರೆ.
ಈ ಚಿತ್ರದಲ್ಲಿ ಶಾರುಖ್ ಖಾನ್ ದ್ವಿಪಾತ್ರದಲ್ಲಿ ಅಭಿನಯಿಸಿದ್ದು, ರೆಡ್ ಚಿಲ್ಲಿಸ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿ ಗೌರಿ ಖಾನ್ ನಿರ್ಮಾಣ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಅತಿಥಿ ಪಾತ್ರ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ. ಸುಮಿತ್ ಅರೋರ ಅವರ ಸಂಭಾಷಣೆಯಿದ್ದು, ಅನಿರುದ್ಧ ರವಿ ಚಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ.