ಶಿವಮೊಗ್ಗ : ರೈಲಿಗೆ ತಲೆಕೊಟ್ಟು ನಿವೃತ್ತ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ವಿನೋಬ ನಗರದ ಸಮೀಪ ನಡೆದಿದೆ.
ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್ (70) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2013 ರಲ್ಲಿ ಉಪನ್ಯಾಸಕ ಹುದ್ದೆಯಿಂದ ನಿವೃತ್ತರಾಗಿದ್ದ ಅವರು ವಿಪರೀತ ಸಾಲ ಮಾಡಿಕೊಂಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗೆ ವಾಕಿಂಗ್ ಗೆ ಎಂದು ಮನೆಯಿಂದ ಹೊರಗೆ ಹೋಗಿದ್ದ ಅವರು ರೈಲಿಗೆ ತಲೆಕೊಟ್ಟಿದ್ದಾರೆ. ಪರಿಣಾಮ ದೇಹ ಮೂರು ಭಾಗವಾಗಿ ಬಿದ್ದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.