ಚಾಮರಾಜನಗರ : ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ.
ಲಾರಿಗೆ ಎತ್ತರವಾಗಿ ಕಬ್ಬು ಲೋಡ್ ಮಾಡಿದ್ದರಿಂದ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿದೆ ಎಂದು ಹೇಳಲಾಗಿದೆ. ಹಾಗೂ ವಿದ್ಯುತ್ ತಂತಿಗಳು ಜೋತು ಬಿದ್ದಿರುವುದರಿಂದ ಅವಘಡಕ್ಕೆ ಕಾರಣವಾಯಿತು ಎಂದು ಹೇಳಲಾಗುತ್ತಿದೆ. ದುರಂತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಮೃತಪಟ್ಟಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.