ಬೆಂಗಳೂರು : ಬಿಜೆಪಿ, ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಸಾಕಷ್ಟು ಜನ ಬರ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನುಡಿದಂತೆ ನಡೆದಿದೆ. 5 ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರ ಒಳ್ಳೆ ಕೆಲಸ ಮಾಡಿದೆ. ನಮ್ಮ ಪಕ್ಷದ ಸಿದ್ದಾಂತವನ್ನು ಮೆಚ್ಚಿ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಜನ ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಬರ್ತಾರೆ ಎಂದು ಹೇಳಿದರು.
ರಾಜ್ಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರಿ ಚರ್ಚೆಗಳಾಗುತ್ತಿದ್ದು, ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿ ಬರುತ್ತಿದೆ. ರಾಜ್ಯದಲ್ಲಿ ಆಪರೇಷನ್ ಹಸ್ತ’ದ ಜೊತೆ ಆಪರೇಷನ್ ‘ಬಿಬಿಎಂಪಿ’ ಕೂಡ ಶುರುವಾಗಿದ್ದು, ಬಿಜೆಪಿಯ ಮಾಜಿ ಕಾರ್ಪೊರೇಟರ್ ಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
KRಪುರ ಕ್ಷೇತ್ರದ ಬಿಜೆಪಿಯ ಇಬ್ಬರು ಮಾಜಿ ಕಾರ್ಪೊರೇಟರ್ಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಾಜಿ ಕಾರ್ಪೊರೇಟರ್ಗಳಾದ ವೀರಣ್ಣ, ಶ್ರೀನಿವಾಸ ಕಾಂಗ್ರೆಸ್ ಸೇರ್ಪಡೆಯಾದರು. . ರಾಜ್ಯದಲ್ಲಿ ಆಪರೇಷನ್ ಹಸ್ತ’ದ ಜೊತೆ ಆಪರೇಷನ್ ‘ಬಿಬಿಎಂಪಿ’ ಕೂಡ ಶುರುವಾಗಿದೆ ಎಂದು ಹೇಳಲಾಗಿದೆ.