ಕಲಬುರಗಿ : ಶಾಸಕರ ನಿವಾಸದ ಬಳಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಶರಣನಗರದಲ್ಲಿ ನಡೆದಿದೆ.
KKRDB ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಮೃತರನ್ನು ದೇವಪ್ಪ(35) ಎಂದು ಗುರುತಿಸಲಾಗಿದೆ. ಶಾಸಕರ ನಿವಾಸದ ಬಳಿ ಮರವೊಂದಕ್ಕೆ ನೇಣುಬಿಗಿದುಕೊಂಡು ದೇವಪ್ಪಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ದೇವಪ್ಪ ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.