alex Certify ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆಗೆ ಸಹಾಯ ಮಾಡಿದ ಮೆಡಿಕಲ್ ಸ್ಟೂಡೆಂಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆಗೆ ಸಹಾಯ ಮಾಡಿದ ಮೆಡಿಕಲ್ ಸ್ಟೂಡೆಂಟ್

ಅನಕಾಪಲ್ಲಿ(ಆಂಧ್ರಪ್ರದೇಶ): ಸಿಕಂದರಾಬಾದ್ ದುರಂತೋ ಎಕ್ಸ್‌ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ ಮಗುವಿಗೆ ಜನ್ಮ ನೀಡಲು ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಸಹಾಯ ಮಾಡಿದ ಘಟನೆ ಮಂಗಳವಾರ ನಡೆದಿದೆ.

ಶ್ರೀಕಾಕುಳಂ ಮೂಲದ ಗರ್ಭಿಣಿ ರೈಲಿನಲ್ಲಿ ಪ್ರಯಾಣಿಸುವಾಗ ಹೆರಿಗೆ ನೋವು ಕಾಣಿಸಿಕೊಂಡಿದೆ, ರೈಲು ಅನಕಾಪಲ್ಲಿ ನಿಲ್ದಾಣಕ್ಕೆ ತಲುಪುವ ಹಂತದಲ್ಲಿತ್ತು. ಇದನ್ನು ನೋಡಿದ ಅದೇ ಕೋಚ್‌ ನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮಹಿಳೆಗೆ ಸಹಾಯ ಮಾಡಲು ಮುಂದಾದರು. ತಕ್ಷಣ ಕಾರ್ಯಪ್ರವೃತ್ತರಾದ ವೈದ್ಯಕೀಯ ವಿದ್ಯಾರ್ಥಿನಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.

ತಾಯಿ ಮತ್ತು ಮಗು ಸುರಕ್ಷಿತವಾಗಿದ್ದಕ್ಕೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದು, ಈ ಪ್ರಯಾಣದ ವೇಳೆ ಅವರನ್ನು ರಕ್ಷಿಸಿದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅನಕಾಪಲ್ಲಿ ನಿಲ್ದಾಣದಲ್ಲಿ ರೈಲು ನಿಂತಾಗ ಉಳಿದ ಸಹ ಪ್ರಯಾಣಿಕರು ಮತ್ತು ಕುಟುಂಬ ಸದಸ್ಯರು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಹೆರಿಗೆಯ ನಂತರ ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...