ಬೆಂಗಳೂರು : ಸೆ.29 ರಂದು ‘ಕರ್ನಾಟಕ ಬಂದ್’ ಗೆ ಕರೆ ನೀಡಲಾಗಿದ್ದು, ಇದರ ನಡುವೆ ನವದೆಹಲಿಯಲ್ಲಿ ಸೆ.29 ರಂದೇ ‘ಕಾವೇರಿ ನೀರು ಪ್ರಾಧಿಕಾರದ ಸಭೆ’ ಕೂಡ ನಿಗದಿಯಾಗಿದೆ.
ಹೌದು, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ರೋಷಾಗ್ನಿ ಭುಗಿಲೆದ್ದಿದೆ. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದು ವಿವಿಧ ಸಂಘಟನೆಗಳು ಪಟ್ಟು ಹಿಡಿದಿದೆ. ಈ ಹಿನ್ನೆಲೆ ದೆಹಲಿಯಲ್ಲಿ ಕಾವೇರಿ ನೀರು ಪ್ರಾಧಿಕಾರ ಮಹತ್ವದ ಸಭೆ ನಡೆಸಲಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಮತ್ತಿತರರು ಭಾಗಿಯಾಗಲಿದ್ದಾರೆ.
ತಮಿಳುನಾಡಿಗೆ ಮತ್ತೆ 18 ದಿನ 3000 ಸಾವಿರ ಕ್ಯೂಸೆಕ್ ನೀರು ಬಿಡಲು ಸರ್ಕಾರಕ್ಕೆ CWRC ಆದೇಶ ಹೊರಡಿಸಿದ್ದು, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮತ್ತೆ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ‘CWRC’ ಆದೇಶ ಹೊರಡಿಸಿರುವ ಹಿನ್ನೆಲೆ ಅನ್ನದಾತರು ಮತ್ತೆ ಸಿಡಿದೆದ್ದಿದ್ದಾರೆ. ಸೆ.29 ರಂದು ಕಾವೇರಿ ನೀರು ಪ್ರಾಧಿಕಾರ ಮತ್ತೆ ಯಾವ ಆದೇಶ ಹೊರಡಿಸುತ್ತೆ ಕಾದು ನೋಡಬೇಕಾಗಿದೆ.