alex Certify BREAKING : ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪ್ರಾಪ್ತ ಬಾಲಕನ ಅವಾಂತರ ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪ್ರಾಪ್ತ ಬಾಲಕನ ಅವಾಂತರ ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಕೊಡಗು : ಅಪ್ರಾಪ್ತ ಬಾಲಕನೋರ್ವ ಅಡ್ಡಾದಿಡ್ಡಿ ಕಾರು ಚಲಾಯಿಸಿ ಮಹಿಳೆಯರಿಗೆ ಡಿಕ್ಕಿ ಹೊಡೆದ ಘಟನೆ ಕುಶಾಲನಗರದ ಸುಂಟಿಕೊಪ್ಪದಲ್ಲಿ ನಡೆದಿದೆ.

ಇನ್ನೂ ಸರಿಯಾಗಿ ಕಾರು ಓಡಿಸಲು ಕಲಿಯದ ಬಾಲಕ ಈ ಆವಾಂತರ ಮಾಡಿದ್ದಾನೆ. ಕಾರು ಡಿಕ್ಕಿಯಾದ ಪರಿಣಾಮ ಶಾಂತಮ್ಮ ಹಾಗೂ ಕಾವ್ಯಾ ಎಂಬುವವರಿಗೆ ಗಂಭೀರವಾದ ಗಾಯಗಳಾಗಿದೆ. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಮಕ್ಕಳಿಗೆ ಪೋಷಕರು ವಾಹನ ಕೊಡಬಾರದು, ಕೊಟ್ಟರೆ ದಂಡ ವಿಧಿಸಲಾಗುತ್ತದೆ ಎಂದು ಪೊಲೀಸರು ಅದೆಷ್ಟೇ ಬಾರಿ ಎಚ್ಚರಿಕೆ ನೀಡಿದರೂ ಇಂತಹ ಪ್ರಕರಣಗಳು ಕಡಿಮೆಯಾಗುತ್ತಿಲ್ಲ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...