ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿ ಸರ್ಕಾರ ರಚಿಸಿದ್ದ ಆಮ್ ಆದ್ಮಿ ಪಕ್ಷ ಇಂದು ಸರ್ಕಾರಕ್ಕೆ ಒಂದು ತಿಂಗಳು ತುಂಬಿರುವ ಹಿನ್ನಲೆಯಲ್ಲಿ ಪಂಜಾಬ್ ಜನತೆಗೆ ಭರ್ಜರಿ ಬಂಪರ್ ಕೊಡುಗೆ ನೀಡಿದೆ.
ಪ್ರತಿ ಕುಟುಂಬಕ್ಕೂ ತಿಂಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಲಭ್ಯವಾಗಲಿದ್ದು, ಜುಲೈ 1 ರಿಂದಲೇ ಇದು ಜಾರಿಗೆ ಬರಲಿದೆ. ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಸರ್ಕಾರಕ್ಕೆ ಇಂದು ಒಂದು ತಿಂಗಳು ತುಂಬಿದ ಸಂದರ್ಭದಲ್ಲಿ ಈ ಮಹತ್ವದ ಘೋಷಣೆ ಮಾಡಲಾಗಿದೆ.
ಪಂಜಾಬ್ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷ, ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಘೋಷಿಸಿತ್ತು. ಅದರಂತೆ ಇಂದು ಸರ್ಕಾರದಿಂದ ಈ ಕುರಿತ ತೀರ್ಮಾನ ಹೊರ ಬಿದ್ದಿದೆ.