alex Certify GOOD NEWS : ಬೆಂಗಳೂರು-ವಿಜಯಪುರ ರೈಲು ಪ್ರಯಾಣದ ಅವಧಿ 14 ರಿಂದ 10 ಗಂಟೆಗೆ ಇಳಿಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಬೆಂಗಳೂರು-ವಿಜಯಪುರ ರೈಲು ಪ್ರಯಾಣದ ಅವಧಿ 14 ರಿಂದ 10 ಗಂಟೆಗೆ ಇಳಿಕೆ..!

ಬೆಂಗಳೂರು : ಬೆಂಗಳೂರು- ವಿಜಯಪುರ ರೈಲು ಪ್ರಯಾಣದ ಅವಧಿಯನ್ನು 14ರಿಂದ 10 ಗಂಟೆಗೆ ಇಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ವೆಚ್ಚ ಹಂಚಿಕೆಯ 9 ರೈಲ್ವೆ ಯೋಜನೆಗಳಿಗೆ ಕಟ್ಟುನಿಟ್ಟಿನ ಕಾಲಮಿತಿ ನಿಗದಿ ರೈಲು ಪ್ರಯಾಣವನ್ನು ಅನುಕೂಲಕರ ಮತ್ತು ಸುಖದಾಯಕವನ್ನಾಗಿ ಮಾಡಲು ಹಾಗೂ ವೆಚ್ಚ ಹಂಚಿಕೆಯ 9 ರೈಲು ಯೋಜನೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಖನಿಜ ಭವನದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಇದರಿಂದಾಗಿ, ವಾಯವ್ಯ ಕರ್ನಾಟಕದ ಜನರು ಬೆಂಗಳೂರಿಗೆ ಬಂದುಹೋಗಲು ಅನುಕೂಲವಾಗಲಿದೆ  ಎಂದರು.

ಈ ಕ್ರಮಗಳ ಜೊತೆಗೆ ಬೆಂಗಳೂರಿನಿಂದ ವಿಜಯಪುರ, ಬಾಗಲಕೋಟೆಗಳಿಗೆ ವಿಶೇಷ ರೈಲುಗಳನ್ನು ಓಡಿಸಬೇಕಾದ ಅಗತ್ಯವಿದೆ. ಮಿಗಿಲಾಗಿ, ವಿದ್ಯುದೀಕರಣ ಕಾಮಗಾರಿ ಮುಗಿದರೆ ವಿಜಯಪುರ, ಬಾಗಲಕೋಟೆಗಳಿಗೆ `ವಂದೇ ಭಾರತ್’ ಎಕ್ಸಪ್ರೆಸ್ ರೈಲು ಸೇವೆ ಆರಂಭಿಸುವಂತೆ ರೈಲ್ವೆ ಮಂಡಳಿಯನ್ನು ಕೋರಲಾಗುವುದು  ಎಂದರು.

ವೆಚ್ಚ ಹಂಚಿಕೆ ಯೋಜನೆಗಳಿಗೆ ಗಡುವು

ರಾಜ್ಯದಲ್ಲಿ ರೈಲ್ವೆಯೊಂದಿಗೆ ವೆಚ್ಚ ಹಂಚಿಕೆ ಆಧಾರದ ಮೇಲೆ 9 ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ. ಆದರೆ, ಇವು ಕಾಲಮಿತಿಯಲ್ಲಿ ಪೂರ್ಣಗೊಳ್ಳದೆ ಇರುವುದರಿಂದ ವೆಚ್ಚ ಮಿತಿ ಮೀರುತ್ತಿದೆ. ಆದ್ದರಿಂದ ಇವುಗಳ ವೆಚ್ಚ ಹೆಚ್ಚಾಗದಂತೆ ನೋಡಿಕೊಂಡು, ತ್ವರಿತ ಗತಿಯಲ್ಲಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್ ಮಂಜುಳಾ, ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ MD  ಸತೀಶ, ನೈರುತ್ಯ ರೈಲ್ವೆಯ ಮುಖ್ಯ ಆಡಳಿತಾಧಿಕಾರಿ, ರಾಮಗೋಪಾಲ್, ರೈಲ್ವೆಯ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಮೂರ್ತಿ ರಾಜು, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರರಾದ ಅರವಿಂದ ಗಲಗಲಿ ಮೊದಲಾದವರು ಉಪಸ್ಥಿತರಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...