ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾ.ಪಂ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿವುಳ್ಳವರು https://www.karnatakaone.gov.in/Public/GramOneFranchiseeTermsಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾ.15 ಕಡೆಯ ದಿನವಾಗಿದೆ. ಶಿವಮೊಗ್ಗ ತಾಲ್ಲೂಕಿನ ಅಗಸವಳ್ಳಿಯಲ್ಲಿ 01, ಭದ್ರಾವತಿ ತಾಲ್ಲೂಕಿನ ಮಾವಿನಕೆರೆ 01, ಕೊಮ್ಮಾರನಹಳ್ಳಿ 01, ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು 01, ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು 01, ಹೊಸನಗರ ತಾಲ್ಲೂಕಿನ ತ್ರಿಣಿವೆ 01 ಮತ್ತು ಮುಂಬಾರುವಿನಲ್ಲಿ 01 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದೆಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.