ಹಿಂದೂಗಳನ್ನು ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ. ಇದಕ್ಕೆ ಡಿಸಿಪಿಯ ಸಾಥ್ ಇದೆ ಎಂದು ಆರೋಪಿಸಿದ ಹಿಂದೂ ಪರ ಸಂಘಟನೆಯ 50ಕ್ಕೂ ಹೆಚ್ಚು ಕಾರ್ಯಕರ್ತರು ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಈ ಪ್ರತಿಭಟನೆಯ ವೇಳೆ ಹಿಂದೂ ಪರ ಸಂಘಟನೆ ಮುಖಂಡ, ಡಿಸಿಪಿಗೆ ಹರಾಮ್ ಕೋರ್ ಎಂದು ನಿಂದಿಸಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೈರಿದೇವರ ಕೊಪ್ಪದ ಆಲ್ ಸಿಂಬಲ್ ಆಫ್ ಗಾಡ್ ಚರ್ಚ್ನಲ್ಲಿ ಆಮಿಷವೊಡ್ಡಿ ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲಾಗ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.
ಈ ವಿಚಾರವಾಗಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಹಾಗೂ ಪಾದ್ರಿಯ ನಡುವೆ ವಾಗ್ವಾದ ಏರ್ಪಟ್ಟಿತ್ತು. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಯಾವುದೇ ಪ್ರಕರಣ ದಾಖಲಿಸದೇ ಪಾದ್ರಿಯನ್ನು ಠಾಣೆಯಿಂದ ಕಳುಹಿಸಿದ್ದರು. ಇದು ಹಿಂದೂ ಸಂಘಟನೆಯ ಕಣ್ಣು ಕೆಂಪಗಾಗುವಂತೆ ಮಾಡಿತ್ತು.
ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಹುಬ್ಬಳ್ಳಿ – ಧಾರವಾಡ ಡಿಸಿಪಿ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿದ್ದಾರೆ. ಐಪಿಎಸ್ ಅಧಿಕಾರಿ ರಾಮರಾಜನ್ ಮತಾಂತರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದ ಹಿಂದೂ ಪರ ಸಂಘಟನೆ ಮುಖಂಡ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಈ ಭಾಷಣದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.