alex Certify ಮತಾಂತರ ವಿರೋಧಿಸಿ ಹುಬ್ಬಳ್ಳಿಯಲ್ಲಿ ತಡರಾತ್ರಿ ಪ್ರತಿಭಟನೆ; ಡಿಸಿಪಿ ವಿರುದ್ಧ ಅವಾಚ್ಯ ಶಬ್ದ ಬಳಕೆ, ವಿಡಿಯೋ ವೈರಲ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತಾಂತರ ವಿರೋಧಿಸಿ ಹುಬ್ಬಳ್ಳಿಯಲ್ಲಿ ತಡರಾತ್ರಿ ಪ್ರತಿಭಟನೆ; ಡಿಸಿಪಿ ವಿರುದ್ಧ ಅವಾಚ್ಯ ಶಬ್ದ ಬಳಕೆ, ವಿಡಿಯೋ ವೈರಲ್​

ಹಿಂದೂಗಳನ್ನು ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ. ಇದಕ್ಕೆ ಡಿಸಿಪಿಯ ಸಾಥ್​ ಇದೆ ಎಂದು ಆರೋಪಿಸಿದ ಹಿಂದೂ ಪರ ಸಂಘಟನೆಯ 50ಕ್ಕೂ ಹೆಚ್ಚು ಕಾರ್ಯಕರ್ತರು ತಡರಾತ್ರಿ ಪೊಲೀಸ್​ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ಪ್ರತಿಭಟನೆಯ ವೇಳೆ ಹಿಂದೂ ಪರ ಸಂಘಟನೆ ಮುಖಂಡ, ಡಿಸಿಪಿಗೆ ಹರಾಮ್​ ಕೋರ್​ ಎಂದು ನಿಂದಿಸಿದ್ದು ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಬೈರಿದೇವರ ಕೊಪ್ಪದ ಆಲ್​ ಸಿಂಬಲ್​ ಆಫ್​ ಗಾಡ್​ ಚರ್ಚ್​ನಲ್ಲಿ ಆಮಿಷವೊಡ್ಡಿ ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲಾಗ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ವಿಚಾರವಾಗಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಹಾಗೂ ಪಾದ್ರಿಯ ನಡುವೆ ವಾಗ್ವಾದ ಏರ್ಪಟ್ಟಿತ್ತು. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಯಾವುದೇ ಪ್ರಕರಣ ದಾಖಲಿಸದೇ ಪಾದ್ರಿಯನ್ನು ಠಾಣೆಯಿಂದ ಕಳುಹಿಸಿದ್ದರು. ಇದು ಹಿಂದೂ ಸಂಘಟನೆಯ ಕಣ್ಣು ಕೆಂಪಗಾಗುವಂತೆ ಮಾಡಿತ್ತು.

ತಡರಾತ್ರಿ ಪೊಲೀಸ್​ ಠಾಣೆ ಎದುರು ಪ್ರತಿಭಟನೆ ನಡೆಸಿದ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಹುಬ್ಬಳ್ಳಿ – ಧಾರವಾಡ ಡಿಸಿಪಿ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿದ್ದಾರೆ. ಐಪಿಎಸ್ ಅಧಿಕಾರಿ ರಾಮರಾಜನ್​ ಮತಾಂತರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದ ಹಿಂದೂ ಪರ ಸಂಘಟನೆ ಮುಖಂಡ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಈ ಭಾಷಣದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...