
ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎ.ಆರ್.ರೆಹಮಾನ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಘು ಹೃದಯಾಘಾತ ಹಿನ್ನೆಲೆಯಲ್ಲಿ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಎ.ಆರ್.ರೆಹಮಾನ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.