
ಚೆನ್ನೈ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಚಿಕಿತ್ಸೆ ಬಳಿಕ ಆಸತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಿರ್ಜಲೀಕರಣದಿಂದ ತೀವ್ರ ಅಸ್ವಸ್ಥರಾಗಿದ್ದ ಎ.ಆರ್.ರೆಹಮಾನ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಎ.ಆರ್.ರೆಹಮಾನ್ ಅವರಿಗೆ ಲಘು ಹೃದಯಾಘಾತವಾಗಿದೆ ಎಂದು ಹೇಳಲಾಗಿತ್ತು. ಆದರೆ ನಿರ್ಜಲೀಕರಣದಿಂದಾಗಿ ಅನಾರೋಗ್ಯಕ್ಕೀಡಾಗಿದ್ದರು ಎಂದು ತಿಳಿದುಬಂದಿದೆ. ರಂಜಾನ್ ಹಿನ್ನೆಲೆಯಲ್ಲಿ ಉಪವಾಸವಿದ್ದ ಕಾರಣಕ್ಕೆ ನಿರ್ಜಲೀಕರಣವುಂಟಾಗಿತ್ತು. ಸದ್ಯ ಚಿಕಿತ್ಸೆ ಬಳಿಕ ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.