alex Certify SHOCKING NEWS: ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಸಾವು

ಮಂಗಳೂರು: ದೇಶಾದ್ಯಂತ 75ನೇ ಸ್ವತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ.

ಧ್ವಜಾರೋಹಣ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧರೊಬ್ಬರು ಮೃತಪಟ್ಟಿರುವ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ನಡೆದಿದೆ.

ಗಂಗಾಧರ ಗೌಡ ಮೃತ ನಿವೃತ್ತ ಯೋಧರು. ಧ್ವಜಾರೋಹಣ ನೆರವೇರಿಸುತ್ತಿದ್ದ ವೇಳೆಯೇ ಹಠಾತ್ ಆಗಿ ಕುಸಿದು ಬಿದ್ದ ಗಂಗಾಧರ ಗೌಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆಯೇ ಅವರು ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...