alex Certify BIG NEWS : ಶಿವಮೊಗ್ಗದಲ್ಲಿ ಮನೆ ಮುಂದೆ ನಿಂತಿದ್ದ ರೌಡಿಶೀಟರ್ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶಿವಮೊಗ್ಗದಲ್ಲಿ ಮನೆ ಮುಂದೆ ನಿಂತಿದ್ದ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ : ಮನೆ ಮುಂದೆ ನಿಂತಿದ್ದ ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ.

ಹತ್ಯೆಯಾದ ರೌಡಿಶೀಟರ್ನನ್ನು ಮುಜಾಯಿದ್ದೀನ್ (32) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮನೆಯಿಂದ ಹೊರಗಡೆ ಬಂದು ಗೇಟ್ ಬಳಿ ನಿಂತಿದ್ದ ವೇಳೆ ದಾಳಿ ನಡೆಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...