ಕೊಡಗು: ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿ ಹಾಗೂ ಮಾನವ ಸಂಘರ್ಷ ಹೆಚ್ಚುತ್ತಿದೆ. ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ನಿವಾಸದ ಬಳಿ ಹುಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ಎ.ಎಸ್.ಪೊನ್ನಣ್ಣ ಅವರ ಮನೆಯ ಬಳಿ ಹುಲಿ ಓಡಾಟ ನಡೆಸಿದ್ದು, ಹುಲಿಯ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಮೂಡಿವೆ. ಈ ಹಿನ್ನೆಲೆಯಲ್ಲಿ ನಿವಾಸಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹುಲಿ ಸೆರೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ.