ಬೆಂಗಳೂರು : ಪಿಜಿಯಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಸೆಕ್ಯೂರಿಟಿ ಗಾರ್ಡ್’ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಪೀಣ್ಯದಲ್ಲಿರುವ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ.ಯುವತಿಯೋರ್ವಳ ಹೆಸರಿಗೆ ಕೊರಿಯರ್ ಬಂದಿದ್ದು, ಅದನ್ನು ತೆಗೆದುಕೊಳ್ಳಲು ಹೊರಗಡೆ ಬಂದ ಯುವತಿ ಜೊತೆ ಸೆಕ್ಯೂರಿಟಿ ಗಾರ್ಡ್’ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ, ಸೆಕ್ಯೂರಿಟಿ ಗಾರ್ಡ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಯುವತಿ ಪೀಣ್ಯ ಸಮೀಪದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಸಂತ್ರಸ್ತೆ ದೂರಿನ ಮೇರೆಗೆ ರುದ್ರಯ್ಯ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.