ಬೆಂಗಳೂರು : ದೇಶದಲ್ಲಿ ‘ಸಂಸತ್ ಭವನ’ವನ್ನೇ ರಕ್ಷಣೆ ಮಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್ ಉಗ್ರಪ್ಪ ವಾಗ್ಧಾಳಿ ನಡೆಸಿದ್ದಾರೆ.
ಈ ದೇಶದ ಹೃದಯ ಮತ್ತು ದೇಶದ ಆಗು- ಹೋಗುಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳುವಂತಹ ಸಂಸತ್ ಭವನವನ್ನೇ ರಕ್ಷಣೆ ಮಾಡಲು ಆಗದಂತಹ ಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಸಂಸತ್ತನ್ನೇ ರಕ್ಷಣೆ ಮಾಡಲು ಸಾಧ್ಯವಿಲ್ಲದವರು ದೇಶವನ್ನು ರಕ್ಷಣೆ ಮಾಡಲು ಸಾಧ್ಯವೇ? ಈ ದೇಶದ ಸಂಸತ್ತನ್ನು ರಕ್ಷಣೆ ಮಾಡುವಲ್ಲಿ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.
ಡಿಸೆಂಬರ್ 13, 2023 ದೇಶದ ಮತ್ತು ಸಂಸತ್ತಿನ ಇತಿಹಾಸದಲ್ಲೇ ಕರಾಳ ದಿನ. ಹಿಂದೆಂದೂ ಸಂಸತ್ತಿನ ಒಳಗಡೆ ಯಾವುದೇ ದಾಳಿಗಳು ನಡೆದಿರಲಿಲ್ಲ. ಪ್ರಜಾಪ್ರಭುತ್ವದ ಪವಿತ್ರ ದೇವಸ್ಥಾನ ಸಂಸತ್ತಿನ ಮೇಲೆ ದಾಳಿ ಮಾಡಿರುವುದು ತೀವ್ರ ಖಂಡನೀಯ. ಮಹಾನ್ ರಾಷ್ಟ್ರ ಭಕ್ತರು ಎಂದು ಕರೆದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಸಭಾಪತಿ ಓಂಪ್ರಕಾಶ್ ಬಿರ್ಲಾ ಅವರು ಈ ಘಟನೆಯ ನೇರ ಹೊಣೆ ಹೊರಬೇಕು. ಪೂರ್ವಾಪರ ತಿಳಿದುಕೊಳ್ಳದೆ ಪಾಸ್ ನೀಡಿದ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರ ಮೇಲೂ ಕ್ರಮ ತೆಗದುಕೊಳ್ಳಬೇಕು ಎಂದು ಆಗ್ರಹಿಸಿದರು.