ಚಿಕ್ಕಮಗಳೂರು : ಬಿಇಓ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಬಿಇಓ ಕಚೇರಿಯಲ್ಲಿ ಕಚೇರಿ ವ್ಯವಸ್ಥಾಪಕರಾಗಿರುವ ನಿಂಗಾನಾಯಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಿಂಗಾನಾಯಕ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.