ಬೆಂಗಳೂರು : ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಹೆಬ್ಬಲಗುಪ್ಪೆಯ ಪಾವನ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.
ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ಓದುತ್ತಿದ್ದ ವಿದ್ಯಾರ್ಥಿನಿ ಇಂದು ಬೆಳಗ್ಗೆ 10:30 ಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಒಂದು ಪತ್ತೆಯಾಗಿದ್ದು, ಡೆತ್ ನೋಟ್ ನಲ್ಲಿ ಏನಿದೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.