ಕಲಬುರಗಿ : ಸರ್ಕಾರಿ ಬಸ್ ನಲ್ಲಿ ತಳ್ಳಾಟ, ನೂಕಾಟದಿಂದ ವಿದ್ಯಾರ್ಥಿನಿ ಅಸ್ವಸ್ಥಗೊಂಡ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದಲ್ಲಿ ನಡೆದಿದೆ.
ಉಚಿತ ಪ್ರಯಾಣದ ಹಿನ್ನೆಲೆ ಬಸ್ ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಬಸ್ ನಲ್ಲಿ ತಳ್ಳಾಟ, ನೂಕಾಟದಿಂದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ವಸ್ತಾರಿ ಗ್ರಾಮದ ಪಿಯುಸಿ ವಿದ್ಯಾರ್ಥಿನಿ ಶರಣಮ್ಮ ವಸ್ತಾರಿಯಿಂದ ಜೇವರ್ಗಿಗೆ ಕಾಲೇಜಿಗೆ ಹೊರಟಿದ್ದ ವೇಳೆ ಘಟನೆ ನಡೆದಿದೆ. ಘಟನೆ ಹಿನ್ನೆಲೆ ಗ್ರಾಮದ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮಕ್ಕೆ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕುಮ್ಮನಸಿರಸಗಿ ಗ್ರಾಮದ ಬಳಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.