ಶಿವಮೊಗ್ಗ : ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಬಲವಂತವಾಗಿ ಮೊಟ್ಟೆ ತಿನ್ನಿಸಿ ನಂತರ ಶಹಬ್ಬಾಶ್ ಗಿರಿ ಕೊಟ್ಟು ಚಪ್ಪಾಳೆ ತಟ್ಟಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಿಸಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದರಿಂದ ವಿದ್ಯಾರ್ಥಿನಿಯ ಆರೋಗ್ಯ ಏರುಪೇರಾಗಿದ್ದು, ಇದರಿಂದ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್ ಆರೋಪಿಸಿದ್ದಾರೆ. ಮೊಟ್ಟೆ ತಿನ್ನಲು ಬಲವಂತ ಮಾಡಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಲು ಶ್ರೀಕಾಂತ್ ಆಗ್ರಹಿಸಿದ್ದಾರೆ.