ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಟೆಕ್ಕಿಯೊಬ್ಬರು 21ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಸಾರಂಗ ಕುಲಕರ್ಣಿ (29) ಎಂದು ಗುರುತಿಸಲಾಗಿದೆ. 2 ತಿಂಗಳ ಹಿಂದೆ ಕೆಲಸ ಕಳೆದುಕೊಂಡಿದ್ದ ಟೆಕ್ಕಿ, ಕೆಲಸ ಇಲ್ಲದ ಕಾರಣ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆಯಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.