alex Certify BREAKING : ದಾವಣಗೆರೆಯಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದಾವಣಗೆರೆಯಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ

ದಾವಣಗೆರೆ : ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 54 ರಲ್ಲಿ ನಡೆದಿದೆ.

ಮೃತರನ್ನು ಕೇರಳ ಮೂಲದ ಅತುಲ್ (25) ಋಷಿಕೇಶ್ (24) ಎಂದು ಗುರುತಿಸಲಾಗಿದೆ. ಜಾಲಿ ರೈಡ್ ಗೆ ಬಂದವರು ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.

ಬೈಕ್ ಸವಾರನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬ್ರಿಡ್ಜ್ ಮೇಲಿಂದ ಹಾರಿ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದಿದ್ದಾರೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಈ ಸಂಬಂಧ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ, ರಸ್ತೆ ಮದ್ಯೆ ಬಿದ್ದಿದ್ದ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಚಾಲಕನಿಗೆ ಕೂಡ ಗಾಯಗಳಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...