ಬ್ಯಾಂಕಾಕ್ : ಮಧ್ಯ ಥೈಲ್ಯಾಂಡ್ ನ ಪಟಾಕಿ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ 20 ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಕಾರ್ಯಕರ್ತರು ತಿಳಿಸಿದ್ದಾರೆ.
ಸ್ಪೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕೇಂದ್ರ ಸುಫಾನ್ ಬುರಿ ಪ್ರಾಂತ್ಯದ ಸಲಾ ಖಾವೊ ಟೌನ್ಶಿಪ್ ಬಳಿ ಸ್ಫೋಟ ಸಂಭವಿಸಿದೆ.ಅಧಿಕೃತ ಸಾವಿನ ಸಂಖ್ಯೆಯನ್ನು ಅಧಿಕಾರಿಗಳು ಇನ್ನೂ ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.