ಕಲಬುರಗಿಯಲ್ಲಿ ದಾರುಣ ಘಟನೆ ನಡೆದಿದ್ದು, ಬಸ್ ಅಡ್ಡಗಟ್ಟಿ ದುಷ್ಕರ್ಮಿಗಳು ಅಪ್ರಾಪ್ತೆಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಕಲಬುರಗಿ ಜಿಲ್ಲೆಯ ಅಟ್ಟೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ಬೆಳಮಗಿ ಗ್ರಾಮದಿಂದ ವಿಕೆ ಸಲಗರದ ಗ್ರಾಮಕ್ಕೆ ಬಸ್ ನಲ್ಲಿ ಬರುತ್ತಿದ್ದಳು. ಈ ವೇಳೆ ಬಸ್ ಅಡ್ಡಗಟ್ಟಿದ ಯುವಕರ ಗುಂಪು ಬಾಲಕಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.