alex Certify BREAKING : ರಾಯಚೂರು ಬಳಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ : 32 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಯಚೂರು ಬಳಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ : 32 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

ರಾಯಚೂರು : ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿಯಾಗಿ 32 ಮಂದಿ ಗಾಯಗೊಂಡು ಐವರ ಸ್ಥಿತಿ ಗಂಭೀರವಾದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ.

ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.ಸಿಂಧನೂರಿನಿಂದ ಅಂಕಲಿಮಠದ ಕಡೆಗೆ ಬಸ್ ಹೊರಟಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿದೆ. ಪರಿಣಾಮ ಐವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ರಸ್ತೆ ಬದಿ ಲಾರಿ ನಿಲ್ಲಿಸಿದ್ದ ಚಾಲಕ ಯಾವುದೇ ಸಿಗ್ನಲ್ ಅಥವಾ ಇಂಡಿಕೇಟರ್ ಹಾಕದ್ದಕ್ಕೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...