ಬಾಗಲಕೋಟೆ : ಕೌಟುಂಬಿಕ ಸಮಸ್ಯೆಗೆ ಮನನೊಂದು ಮಹಿಳಾ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ಬಾಗಲಕೋಟೆ ಮೂಲದ ಜ್ಯೋತಿ (29) ಎಂದು ಗುರುತಿಸಲಾಗಿದೆ. ಅವರು ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಜ್ಯೋತಿ ಕಾಪು ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.