ಚಾಮರಾಜನಗರ : ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹೊರೆಯಾಲ ಗ್ರಾಮದ ಜ್ಯೋತಿ (28) ಮಕ್ಕಳಾದ ಭಾಂಧವ್ಯ (7) ಮಾಸನ (3) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 10 ವರ್ಷದ ಹಿಂದೆ ಹೊರೆಯಾಲದ ಯೋಗೇಶ್ ಜೊತೆ ಮದುವೆ ಮಾಡಿಕೊಂಡಿದ್ದ ಜ್ಯೋತಿ ಆತ್ನಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿದೆ. ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.