alex Certify ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನೇ ಕೊಲೆಗೈದ ತಾಯಿಗೆ ಜೀವಾವಧಿ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನೇ ಕೊಲೆಗೈದ ತಾಯಿಗೆ ಜೀವಾವಧಿ ಶಿಕ್ಷೆ

ಚಿಕ್ಕೋಡಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಹೆತ್ತ ಮಗನನ್ನೇ ತಾಯಿ ಕೊಲೆ ಮಾಡಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ತಾಯಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಸುಧಾ ಸುರೇಶ್ ಕರಿಗಾರಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2019 ರ ಅಕ್ಟೋಬರ್ 22 ರಂದು ನಡೆದ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಜೀವಾವಧಿ ಶಿಕ್ಷೆ ಮತ್ತು 7 ಸಾವಿರ ದಂಡ ವಿಧಿಸಿದೆ.

ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಸುಧಾ ಸುರೇಶ್, ರಾಮಪ್ಪ ಕೆಂಚಪ್ಪನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಚಾರ ಮಗ ಪ್ರವೀಣ್ ಗೊತ್ತಾಗಿದೆ. ಮಗ ಎಲ್ಲಾದರೂ ಈ ವಿಷಯ ಬಾಯಿ ಬಿಡುತ್ತಾನೆಂದು ಹೆದರಿದ ತಾಯಿ ಪ್ರವೀಣ್ ನನ್ನು ಜಮೀನಲ್ಲಿರುವ ಬಾವಿಗೆ ತಳ್ಳಿ ಕೊಲೆ ಮಾಡಿದ್ದಳು. ಈ ಸಂಬಂಧ ಕೋರ್ಟ್ ಆದೇಶ ಹೊರಡಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...