ಗ್ರೀನ್ ಟೀ ಸೇವನೆಯಿಂದ ಸಾಕಷ್ಟು ಪ್ರಯೋಜನವಿದೆ. ತೂಕ ಇಳಿಸುವುದ್ರಿಂದ ಹಿಡಿದು, ಬಾಯಿ ವಾಸನೆ, ಒತ್ತಡ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಗ್ರೀನ್ ಟೀ ಮದ್ದು. ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಗ್ರೀನ್ ಟೀ ಹೆಚ್ಚು ಪ್ರಸಿದ್ಧಿ ಪಡೆಯುತ್ತಿದೆ. ಬಹುತೇಕರು ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಗ್ರೀನ್ ಟೀ ಸೇವನೆ ಮಾಡ್ತಾರೆ. ಆದ್ರೆ ಇದು ತಪ್ಪು ವಿಧಾನ. ಖಾಲಿ ಹೊಟ್ಟೆಯಲ್ಲಿ ಗ್ರೀನ್ ಟೀ ಸೇವನೆ ಮಾಡುವುದ್ರಿಂದ ಸಾಕಷ್ಟು ಆರೋಗ್ಯ ಸಮಸ್ಯೆ ಕಾಡುತ್ತದೆ.
ಗ್ರೀನ್ ಟೀನಲ್ಲಿ ಟ್ಯಾನಿನ್ಸ್ ಅಂಶವಿರುತ್ತದೆ. ಇದು ಹೊಟ್ಟೆಯಲ್ಲಿ ಗ್ಯಾಸ್ ಉತ್ಪತ್ತಿಗೆ ಕಾರಣವಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಗ್ರೀನ್ ಟೀ ಸೇವನೆ ಮಾಡುವುದ್ರಿಂದ ಹೊಟ್ಟೆಯಲ್ಲಿ ಆಮ್ಲದ ಪ್ರಮಾಣ ಹೆಚ್ಚಾಗಿ ಹೊಟ್ಟೆ ನೋವು, ವಾಕರಿಕೆ, ವಾಂತಿಗೆ ಕಾರಣವಾಗುತ್ತದೆ.
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಗ್ರೀನ್ ಟೀ ಸೇವನೆ ಮಾಡುವುದ್ರಿಂದ ಪ್ರೋಟೀನ್ ಮಟ್ಟ ಕಡಿಮೆಯಾಗುತ್ತದೆ. ಇದು ರಕ್ತ ಹೆಪ್ಪುಗಟ್ಟುವ ಸಮಸ್ಯೆಗೆ ಕಾರಣವಾಗುತ್ತದೆ.
ಕಾರ್ಟಿಸೋಲ್ ಮತ್ತು ಅಡ್ರಿನಾಲಿನ್ ಎಂಬ ಒತ್ತಡದ ಹಾರ್ಮೋನು ಬಿಡುಗಡೆಯಾಗುತ್ತದೆ. ಇದು ಹೃದಯ ಬಡಿತ ಮತ್ತು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಹೃದಯ ರೋಗಿಗಳು ಮರೆತೂ ಖಾಲಿ ಹೊಟ್ಟೆಯಲ್ಲಿ ಗ್ರೀನ್ ಟೀ ಸೇವನೆ ಮಾಡಬಾರದು.
ಕಬ್ಬಿಣದ ಕೊರತೆ ಹಾಗೂ ರಕ್ತ ಹೀನತೆ ಸಮಸ್ಯೆಯಿಂದ ಬಳಲುತ್ತಿರುವ ಜನರು ಕೂಡ ಖಾಲಿ ಹೊಟ್ಟೆಯಲ್ಲಿ ಗ್ರೀನ್ ಟೀ ಸೇವನೆ ಮಾಡಬಾರದು. ಊಟಕ್ಕೆ ಮೊದಲು ಅಥವಾ ನಂತ್ರ ನೀವು ಗ್ರೀನ್ ಟೀ ಸೇವನೆ ಮಾಡಬಹುದು, ಇದು ತೂಕ ಇಳಿಸಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ ಸುಲಭವಾಗುತ್ತದೆ. ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲ.