ಬೆಂಗಳೂರು : ಕುಡಿದ ಮತ್ತಿನಲ್ಲಿ ಯುವಕನೋರ್ವ ಸ್ನೇಹಿತನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಸಣ್ಣೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ಎಣ್ಣೆ ಪಾರ್ಟಿ ಮಾಡಿದ ನಂತರ ಸ್ನೇಹಿತರ ನಡುವೆ ಗಲಾಟೆ ನಡೆದಿದೆ. ಮೂರ್ತಿಗೆ ಕೀರ್ತಿ ಎಂಬಾತ ಚಾಕು ಇರಿದು ಕೊಲೆ ಮಾಡಿದ್ದಾನೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಟ್ಟಿನಲ್ಲಿ ಕುಡಿದ ನಶೆಯಲ್ಲಿ ಸ್ನೇಹಿತ ತನ್ನ ಗೆಳೆಯನ ಪ್ರಾಣವನ್ನೇ ತೆಗೆದಿದ್ದಾನೆ.