ಬೆಂಗಳೂರು : ನಮ್ಮ ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಾಲಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ ನಡೆದಿದೆ.
ಮೆಟ್ರೋ ರೈಲು ಬರುತ್ತಿದ್ದಂತೆ ಯುವಕ 2 ಹಳಿಗಳ ನಡುವೆ ಮಲಗಿದ್ದಾನೆ.
ಕೂಡಲೇ ಸಿಬ್ಬಂದಿಗಳು ‘ಮೆಟ್ರೋ ಸಂಚಾರ’ ಸ್ಥಗಿತಗೊಳಿಸಿ ಯುವಕನನ್ನು ರಕ್ಷಿಸಿದ್ದಾರೆ. ಈ ಹಿನ್ನೆಲೆ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.
ನಮ್ಮ ಮೆಟ್ರೋ ರೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಹಲವು ಪ್ರಕರಣಗಳು ಇತ್ತೀಚೆಗೆ ನಡೆದಿದೆ. ನಮ್ಮ ಮೆಟ್ರೋ ಸೂಸೈಡ್ ಸ್ಪಾಟ್ ಆಗುತ್ತಿದ್ಯಾ ಎಂಬ ಪ್ರಶ್ನೆ ಕಾಡುತ್ತಿದೆ.