alex Certify ಎಚ್ಚರ : ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದು ಯುವಕನಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಚ್ಚರ : ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದು ಯುವಕನಿಗೆ ಗಂಭೀರ ಗಾಯ

ಧಾರವಾಡ : ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದು ಯುವಕನಿಗೆ ಗಂಭೀರ ಗಾಯಗಳಾದ ಘಟನೆ ಧಾರವಾಡದ ನವಲಗುಂದ ಪಟ್ಟಣದ ಅಣ್ಣಿಗೇರಿ ರಸ್ತೆಯಲ್ಲಿ ನಡೆದಿದೆ.

ಸಮೀರ್ ಎಂಬ ಯುವಕ ಬೈಕ್ ಚಲಾಯಿಸಿಕೊಂಡು ರೀಲ್ಸ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಪರಿಣಾಮ ಆತನಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ನಡುರಸ್ತೆಯಲ್ಲಿ ಬೈಕ್ ಸ್ಟಂಟ್ ಮಾಡುವ ಹಾವಳಿ ಹೆಚ್ಚಾಗಿದ್ದು, ಪೊಲೀಸರು ಅದೆಷ್ಟೇ ವಾರ್ನ್ ಮಾಡಿದ್ರೂ ಯುವಕರು ಮಾತ್ರ ಬೈಕ್ ಸ್ಟಂಟ್ ಮಾಡುವುದನ್ನು ಬಿಡುತ್ತಿಲ್ಲ. ಇದರಿಂದ ಸಾರ್ವಜನಿಕರು, ವಾಹನ ಸವಾರರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ.

ಸಾಂದರ್ಭಿಕ ಚಿತ್ರ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...