alex Certify BREAKING : ಶಿವಮೊಗ್ಗದಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗದಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಶಿವಮೊಗ್ಗ : ಚಾಕು ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕೆ ಹೆಚ್ ಬಿ ಕಾಲೋನಿಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಜಾಫರ್ (32) ಎಂದು ಗುರುತಿಸಲಾಗಿದೆ. ಈದ್ ಮಿಲಾದ್ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ 2 ಗುಂಪುಗಳ ನಡುವೆ ಜಗಳ ನಡೆದಿತ್ತು. ಇದನ್ನು ರಾಜಿ ಪಂಚಾಯ್ತಿ ಮೂಲಕ ಬಗೆಹರಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಗಿತ್ತು. ಇಂದು ಸಭೆ ಮುಗಿಸಿ ಹೊರಬರುತ್ತಿದ್ದಾಗ ದುಷ್ಕರ್ಮಿಯೋರ್ವ ಜಾಫರ್ ಗೆ ಚಾಕುವಿನಿಂದ ಇರಿದಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಜಾಫರ್ ನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಶಿಕಾರಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...