ತುಮಕೂರು : ಕುಡಿದ ಮತ್ತಿನಲ್ಲಿ ಯುವಕನೋರ್ವ ಯುವತಿ ಮೇಲೆ ಬೈಕ್ ಹರಿಸಿದ ಘಟನೆ ತುಮಕೂರು ಜಿಲ್ಲೆಯ ಶಿರಾ ರಂಗನಾಥ ಕಾಲೇಜು ಸಮೀಪ ನಡೆದಿದೆ.
ಯುವತಿಯೊಬ್ಬಳು ಕಾಲೇಜು ಬಳಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿಕೊಂಡು ಬಂದ ಸವಾರನೋರ್ವ ಯುವತಿ ಮೇಲೆ ಬೈಕ್ ಹರಿಸಿದ್ದಾನೆ. ಇದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಬೈಕ್ ಸವಾರನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯಲ್ಲಿ ಯುವತಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.