alex Certify BIG BREAKING: ಮುರುಘಾ ಶ್ರೀ ಪ್ರಕರಣ: ಹಾಸ್ಟೆಲ್ ವಾರ್ಡನ್ ರಶ್ಮಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮುರುಘಾ ಶ್ರೀ ಪ್ರಕರಣ: ಹಾಸ್ಟೆಲ್ ವಾರ್ಡನ್ ರಶ್ಮಿ ಅರೆಸ್ಟ್

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಎಂಬುವವರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದು, ಬಂಧನದ ಬಳಿಕ ತೀವ್ರ ಎದೆನೋವಿನಿಂದ ಕಾರಾಗೃಹದಲ್ಲಿಯೇ ಸ್ವಾಮೀಜಿ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಮುರುಘಾ ಶ್ರೀಗಳಿಗೆ ಸಹಕಾರ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿಯನ್ನು ನಿನ್ನೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಪೊಲೀಸರು ರಶ್ಮಿ ಅವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...