ಹೊಸಪೇಟೆ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಬಿಎಸ್ಎನ್ಎಲ್ ಕಚೇರಿಯ ಗೇಟ್ ಮುರಿದು ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ.
ಆಧಾರ್ ಕಾರ್ಡ್ ತಿದ್ದುಪಡಿಗೆ ಬಂದಿದ್ದ 7 ವರ್ಷದ ಗೌತಮ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಹರಪನಹಳ್ಳಿ ತಾಲೂಕಿನ ಬಾಗಳಿ ಗ್ರಾಮದ ಮಲ್ಲಿಕಾರ್ಜುನ ಅವರ ಪುತ್ರ ಗೌತಮ್ ಬಿಎಸ್ಎನ್ಎಲ್ ಕಚೇರಿ ಆವರಣದಲ್ಲೇ ಇರುವ ಆಧಾರ್ ತಿದ್ದುಪಡಿ ಕೇಂದ್ರದಲ್ಲಿ ನಿಂತಿದ್ದ ವೇಳೆ ಗೇಟ್ ಮುರಿದು ಬಿದ್ದು ಸಾವನ್ನಪ್ಪಿದ್ದಾನೆ. ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.