ರಾಯಚೂರು: 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ ಈಗಾಗಲೇ ಒಂಬತ್ತು ಹಂತಗಳಲ್ಲಿ 12,016 ಫಲಾನುಭವಿಗಳಿಗೆ 9.50 ಕೋಟಿ ರೂ. ಇನ್ ಪುಟ್ ಸಬ್ಸಿಡಿಯನ್ನು ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ.
ಜಿಲ್ಲೆಯ ಮುಂಗಾರು ಹಂಗಾಮಿನ ಪ್ರವಾಹ ಅಥವಾ ಅಕಾಲಿಕ ಮಳೆ ಸಂದರ್ಭದಲ್ಲಿ ಬೆಳೆ ಹಾನಿಯಾಗಿರುವ ರೈತರ ಮಾಹಿತಿಯನ್ನು ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಿರುವ ಹತ್ತನೇ ಹಂತದ 39,810 ರೈತರಿಗೆ 26,68,48,262 ರೂ.ಗಳ (26.69 ಕೋಟಿ ರೂ.) ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲು ಅನುಮೊದನೆ ನೀಡಲಾಗಿದೆ.
ಅತೀ ಶೀಘ್ರದಲ್ಲಿ ಸರ್ಕಾರದಿಂದ ನೇರವಾಗಿ ಆಧಾರ ಸಂಖ್ಯೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗುವುದು ಮತ್ತು ಬಾಕಿ ಉಳಿದ ರೈತರ ಮಾಹಿತಿಯನ್ನು ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಲಾಗಿದ್ದು, ಹಂತ ಹಂತವಾಗಿ ಪರಿಹಾರ ಧನವನ್ನು ರೈತರ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.