ಕೋವಿಡ್-19 ಲಸಿಕೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯೊಂದರಲ್ಲಿ, ಕೋವಿನ್ ಪೋರ್ಟಲ್‌ನಲ್ಲಿ ಕೋವಿಡ್-19 ಲಸಿಕೆ ಪಡೆಯಲು ನೋಂದಣಿಯಾಗಲು ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.
ನ್ಯಾಯಾಧೀಶರಾದ ಡಿ.ವೈ. ಚಂದ್ರಚೂಡ್ ಮತ್ತು ಸೂರ್ಯ ಕಾಂತ್ ಇದ್ದ ಪೀಠಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ವಿಚಾರವನ್ನು ತಿಳಿಸಿದ್ದು, ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಒಂಬತ್ತು ವಿವಿಧ ದಾಖಲೆಗಳಲ್ಲಿ ಒಂದನ್ನು ಸಲ್ಲಿಸುವ ಮೂಲಕ ಲಸಿಕಾಕರಣಕ್ಕೆ ನೋಂದಣಿಯಾಗಬಹುದು ಎಂದು ತಿಳಿಸಿದೆ.
BIG BREAKING NEWS: ವೇಗವಾಗಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆ
ಕೋವಿಡ್-19 ಲಸಿಕಾಕರಣಕ್ಕೆ ಕೋವಿನ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಲು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಕೇಳಲಾಗುತ್ತಿದೆ ಎಂದು ಸಿದ್ದಾರ್ಥ ಶಂಕರ್ ಶರ್ಮಾ ಹೆಸರಿನ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಸುಪ್ರೀಂ, ಕೇಂದ್ರಕ್ಕೆ ಈ ಸಂಬಂಧ ಅಕ್ಟೋಬರ್ 1, 2021ರಂದು ವಿವರ ಕೋರಿ ನೋಟಿಸ್ ಕಳುಹಿಸಿತ್ತು.
ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿತರಾಗಲು ಆಧಾರ್ ಕಡ್ಡಾಯವಲ್ಲ ಎಂದು ಪುಷ್ಟೀಕರಿಸುವ ದಾಖಲೆಗಳನ್ನು ಅಫಿಡವಿಟ್ ಜೊತೆಗೆ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದೇ ವೇಳೆ, ತಮ್ಮೊಂದಿಗೆ ಮೇಲ್ಕಂಡ ದಾಖಲೆಗಳನ್ನು ಹೊಂದಿರದ ಜೈಲು ವಾಸಿಗಳು, ಮಾನಸಿಕ ರೋಗಿಗಳಂಥ ವಿಶೇಷ ಪ್ರಕರಣಗಳ ವ್ಯಕ್ತಿಗಳಿಗೂ ಕೋವಿಡ್ ಲಸಿಕೆ ನೀಡಲು ಸೂಕ್ತ ವ್ಯವಸ್ಥೆ ಮಾಡಿಕೊಂಡಿರುವುದಾಗಿ ಅಫಿಡವಿಟ್‌ನಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.