
ಭಾರತದಲ್ಲಿ ಅತ್ಯಂತ ಅಗತ್ಯ ದಾಖಲೆಗಳಲ್ಲಿ ಆಧಾರ್ ಕಾರ್ಡ್ ಒಂದು. ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೆ ಚಿಂತಿಸುವ ಅಗತ್ಯವಿಲ್ಲ. ಕೇವಲ ಒಂದು ಸಂಖ್ಯೆಯನ್ನು ಡಯಲ್ ಮಾಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.
1947ರ ಸಂಖ್ಯೆಗೆ ಡಯಲ್ ಮಾಡಿ ಸಮಸ್ಯೆಗೆ ಪರಿಹಾರ ಪಡೆಯಬಹುದು. ಯುಐಡಿಎಐ ಟ್ವೀಟ್ ಮಾಡುವ ಮೂಲಕ ಈ ಸಂಖ್ಯೆಯ ಬಗ್ಗೆ ಮಾಹಿತಿ ನೀಡಿದೆ. ಈ ಸಂಖ್ಯೆ 12 ಭಾಷೆಗಳಲ್ಲಿ ಲಭ್ಯವಿದೆ. ಆಧಾರ್‌ಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಒಂದೇ ಫೋನ್ ಕರೆಯಲ್ಲಿ ಪರಿಹರಿಸಲಾಗುವುದು ಎಂದು ಯುಐಡಿಎಐ ಟ್ವೀಟ್ ಮಾಡಿದೆ.
ಆಧಾರ್ ಸಹಾಯವಾಣಿ 1947 ಹಿಂದಿ, ಇಂಗ್ಲಿಷ್, ತೆಲುಗು, ಕನ್ನಡ, ತಮಿಳು, ಮಲಯಾಳಂ, ಪಂಜಾಬಿ, ಗುಜರಾತಿ, ಮರಾಠಿ, ಒರಿಯಾ, ಬೆಂಗಾಲಿ, ಅಸ್ಸಾಮಿ ಮತ್ತು ಉರ್ದು 12 ಭಾಷೆಗಳಲ್ಲಿ ಲಭ್ಯವಿದೆ.
ಈ ಸಂಖ್ಯೆಯನ್ನು ನೆನಪಿಟ್ಟುಕೊಳ್ಳುವುದು ಸಹ ತುಂಬಾ ಸುಲಭ. ಯಾವುದೇ ಶುಲ್ಕವಿಲ್ಲದೆ 1947ರ ನಂಬರ್ ಗೆ ಕರೆ ಮಾಡಬಹುದು.ಈ ಸೌಲಭ್ಯಕ್ಕಾಗಿ ಕಾಲ್ ಸೆಂಟರ್ ಪ್ರತಿನಿಧಿಗಳು ಬೆಳಿಗ್ಗೆ 7 ರಿಂದ ರಾತ್ರಿ 11 ರವರೆಗೆ ಕೆಲಸ ಮಾಡಲಿದ್ದಾರೆ. ಭಾನುವಾರ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಸೇವೆ ಲಭ್ಯವಿರುತ್ತದೆ.