ಬೆಂಗಳೂರು: ಆಧಾರ್ ಜೋಡಣೆ ಆಗದ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಹೊರತುಪಡಿಸಿ ಬೇರೆ ಬ್ಯಾಂಕ್ ಖಾತೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಮಹಿಳೆಯರು ಆಧಾರ್ ಲಿಂಕ್ ಆಗದ ಬ್ಯಾಂಕ್ ಖಾತೆಯ ಪಾಸ್ ಬುಕ್ ಜೆರಾಕ್ಸ್ ಪ್ರತಿ ನೀಡಬೇಕು. ಅದರ ಜೊತೆ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ತೆಗೆದುಕೊಂಡು ಬರಬೇಕು. ನೋಂದಣಿ ಮಾಡಿದ ಸ್ಥಳದಲ್ಲಿ ಮಂಜೂರಾತಿ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.