alex Certify ಇಂದಿನಿಂದ ಆಪ್ ಅಭ್ಯರ್ಥಿಗಳ ಪರ ಪಂಜಾಬ್ ಸಿಎಂ ಭರ್ಜರಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಆಪ್ ಅಭ್ಯರ್ಥಿಗಳ ಪರ ಪಂಜಾಬ್ ಸಿಎಂ ಭರ್ಜರಿ ಪ್ರಚಾರ

ಬೆಂಗಳೂರು: ಇಂದಿನಿಂದ ಮೂರು ದಿನಗಳ ಪಂಜಾಬ್ ಸಿಎಂ ಭಗವಂತ್ ಮಾನ್ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ 1.30 ಕ್ಕೆ ಗದಗ ಜಿಲ್ಲೆಯ ರೋಣದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸಲಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಬಾಗಲಕೋಟೆ ಜಿಲ್ಲೆ ತೇರದಾಳದಲ್ಲಿ ರೋಡ್ ಶೋ ನಡೆಸುವರು. ಮಧ್ಯಾಹ್ನ 3 ಗಂಟೆಗೆ ತೇರದಾಳದಲ್ಲಿ ರೈತರ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

ನಾಳೆ ನಾಡಿದ್ದು ಆಮ್ ಆದ್ಮಿ ಪಕ್ಷದ ಸಭಾ ಸದಸ್ಯ ರಾಘವ ಛಡ್ಡಾ ಬೆಂಗಳೂರಿನಲ್ಲಿ ಆಪ್ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...