
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಮರ್ಥವಾಗಿ ಸಜ್ಜುಗೊಳಿಸಲು ಮುಂದಾಗಿರುವ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕ ಮತ್ತು ಜಿಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದ್ದು, ಶೀಘ್ರವೇ ಕ್ರಿಯಾಶೀಲ ತಂಡ ರಚಿಸಲಾಗುವುದು.
ಆಮ್ ಆದ್ಮಿ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಮತ್ತು ದೆಹಲಿ ಶಾಸಕ ದಿಲೀಪ್ ಪಾಂಡೆ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಮರೋಪಾದಿಯಲ್ಲಿ ಸಿದ್ದಗೊಳ್ಳಲಿದೆ. ಕಳೆದ ಐದು ತಿಂಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸಲಾಗಿದ್ದು, ಸಾವಿರಾರು ಕಾರ್ಯಕರ್ತರು ಬೆಂಬಲಿಗರೊಂದಿಗೆ ಸಂಪರ್ಕ ಸಾಧಿಸಲಾಗಿದೆ. ರಾಜ್ಯ ಘಟಕ ಮತ್ತು ಜಿಲ್ಲಾ ಪದಾಧಿಕಾರಿಗಳ ತಂಡ ವಿಸರ್ಜನೆ ಮಾಡಲಾಗಿದೆ. ಬದಲಾವಣೆ ತರುವ ಹೊಸ ತಂಡ ರಚಿಸಲಾಗುವುದು ಎಂದು ತಿಳಿಸಿದ್ದಾರೆ.