BREAKING NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ಶಾಸಕ ಅಮಾನತ್ ಉಲ್ಲಾ ಖಾನ್ ಅರೆಸ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಆಮ್ ಆದ್ಮಿ ಪಕ್ಷದ(ಎಎಪಿ) ಮತ್ತೊಬ್ಬ ಶಾಸಕ ಅಮಾನತ್ ಉಲ್ಲಾ ಖಾನ್ ಅವರನ್ನು ಬಂಧಿಸಿದೆ.

ದೆಹಲಿ ವಕ್ಫ್ ಬೋರ್ಡ್‌ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಕೇಂದ್ರ ತನಿಖಾ ಸಂಸ್ಥೆಯ ಮುಂದೆ ಹಾಜರಾದ ಕೆಲವೇ ಗಂಟೆಗಳ ನಂತರ ಅವರ ಬಂಧನವಾಗಿದೆ.

ಓಖ್ಲಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ 50 ವರ್ಷದ ಶಾಸಕ ಖಾನ್ ಕಳೆದ ವಾರ ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ನಂತರ ಸ್ವತಃ ಶರಣಾಗಿದ್ದಾರೆ.

ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅದರಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಏಪ್ರಿಲ್ 18ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ತನಿಖೆಗೆ ಸಹಕರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read