alex Certify BIG NEWS: ಜನವರಿ 18 ನೂತನ ಮುಖ್ಯಮಂತ್ರಿ ಹೆಸರು ಘೋಷಣೆ: ಸಿಎಂ ಕೇಜ್ರಿವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನವರಿ 18 ನೂತನ ಮುಖ್ಯಮಂತ್ರಿ ಹೆಸರು ಘೋಷಣೆ: ಸಿಎಂ ಕೇಜ್ರಿವಾಲ್

ನವದೆಹಲಿ: ಪಂಜಾಬ್ ನೂತನ ಮುಖ್ಯಮಂತ್ರಿ ಹೆಸರನ್ನು ಜನವರಿ 18ರಂದು ಘೋಷಣೆ ಮಾಡಲಾಗುವುದು ಎಂದು ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಾರಾಗಬೇಕೆಂದು ಹೆಸರು ಸೂಚಿಸುವಂತೆ ಜನತೆಗೆ ಅವರು ಮನವಿ ಮಾಡಿದ್ದು, ಇದಕ್ಕಾಗಿ ಪಕ್ಷದ ವತಿಯಿಂದ ಪ್ರತ್ಯೇಕ ಮೊಬೈಲ್ ಸಂಖ್ಯೆ ನೀಡಲಾಗಿತ್ತು. ಅದರ ಅನುಸಾರ ನೂತನ ಮುಖ್ಯಮಂತ್ರಿ ಹೆಸರನ್ನು ಜನವರಿ 18 ರಂದು ಘೋಷಣೆ ಮಾಡಲು ಆಮ್ ಆದ್ಮಿ ಪಕ್ಷ ತೀರ್ಮಾನಿಸಿದೆ.

117 ಸದಸ್ಯಬಲದ ಪಂಜಾಬ್ ವಿಧಾನಸಭೆಗೆ ಈ ಮೊದಲು ಫೆಬ್ರವರಿ 14 ರಂದು ಚುನಾವಣೆ ನಿಗದಿ ಮಾಡಲಾಗಿತ್ತು. ಗುರು ರವಿದಾಸ್ ಜಯಂತಿ ಫೆಬ್ರವರಿ 16 ರಂದು ಇರುವುದರಿಂದ ಫೆಬ್ರವರಿ 20 ರಂದು ಚುನಾವಣೆ ನಿಗದಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...