ನವದೆಹಲಿ: ದೆಹಲಿ ಆಪ್ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದ ರಾಜೇಂದ್ರ ಪಾಲ್ ಗೌತಮ್ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿ ಸಚಿವರಾಗಿದ್ದ ರಾಜೇಂದ್ರ ಪೌಲ್ ಹಿಂದೂ ವಿರೋಧಿ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.
ಅ. 5 ರಂದು ದೆಹಲಿಯ ಅಂಬೇಡ್ಕರ್ ಭವನದಲ್ಲಿ ಅವರು, ನನಗೆ ಬ್ರಹ್ಮ, ವಿಷ್ಣು, ಮಹೇಶ್ವರರಲ್ಲಿ ನಂಬಿಕೆ ಇಲ್ಲ, ಪೂಜಿಸುವುದಿಲ್ಲ ಎಂದು ಸಾರ್ವಜನಿಕ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದರು. ಅವರನ್ನು ವಜಾಗೊಳಿಸುವಂತೆ ಬಿಜೆಪಿ ಆಗ್ರಹಿಸಿದ್ದು, ಅವರೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜೇಂದ್ರ ಪಾಲ್ ಗೌತಮ್ ಅವರು ಹಿಂದೂ ದೇವತೆಗಳನ್ನು ನಿಂದಿಸಿದ ಧಾರ್ಮಿಕ ಮತಾಂತರ ಸಮಾರಂಭದಲ್ಲಿ ಉಪಸ್ಥಿತರಿದ್ದು, ನೀಡಿದ್ದ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು. ಹಿಂದೂ ದೇವತೆಗಳನ್ನು ದೇವರೆಂದು ಪರಿಗಣಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಡಿಯೋ ವೈರಲ್ ಆದ ನಂತರ ವಿವಾದ ಉಂಟಾಗಿ ಅವರು ರಾಜೀನಾಮೆ ನೀಡಿದ್ದಾರೆ.